ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿಯಿರುವ 81 ಹುದ್ದೆಗಳಿಗೆ ನೇರ ನೇಮಕಾತಿ karnataka women's and child development deportment
ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳು ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು :- 1}ಅಂಗನವಾಡಿ ಕಾರ್ಯಕರ್ತೆ
2} ಸಹಾಯಕಿ
ಒಟ್ಟು ಹುದ್ದೆಗಳು :- 13+68 =81
ವಿದ್ಯಾರ್ಹತೆ : -
ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4ನೇ ತರಗತಿ ತೇರ್ಗಡೆ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು ಈ ಆಯ್ಕೆ ಪ್ರಕ್ರಿಯೆಯಲ್ಲಿ (9ನೇ ತರಗತಿ ಗಿಂತ ಹೆಚ್ಚಿನ ವಿದ್ಯಾಭ್ಯಾಸ ಇದ್ದರು ಪರಿಗಣಿಸುವುದಿಲ್ಲ).
ವಯಸ್ಸು :- ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಸಲ್ಲಿಸಲು 18ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿ ವಿಧಾನ :-
ಈ ಮೇಲಿನ ಎರಡು ಹುದ್ದೆಗಳಿಗೆ ಅಂದರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಖಾಲಿ ಇರುವ ಅಥವಾ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಪ್ರದೇಶದ ನಿವಾಸಿಯಾಗಿರಬೇಕು ಅಂದರೆ ಅಂಗನವಾಡಿ ಕೇಂದ್ರದಿಂದ ಮೂರು ಕಿಲೋಮೀಟರ್ ವ್ಯಾಪ್ತಿಯೊಳಗೆ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :-
1. ಭರ್ತಿಮಾಡಿದ ಅರ್ಜಿ (ಆನ್ಲೈನ್).
2. ಜನನ ಪ್ರಮಾಣ ಪತ್ರ ಅಥವಾ ಜನ್ಮದಿನಾಂಕ ಇರುವ ಎಸೆಸೆಲ್ಸಿ ಅಂಕಪಟ್ಟಿ.
3. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣಪತ್ರ.
4. ವಿದ್ಯಾರ್ಹತೆಯ ದೃಢೀಕರಣ ಪತ್ರ (ಶಾಲೆಯಿಂದ)
5. ಮೀಸಲಾತಿ ಅಭ್ಯರ್ಥಿಗಳ ಆದರೆ ಜಾತಿ ಪ್ರಮಾಣ ಪತ್ರ.
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ
05-01-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
05-02-2021
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಮಹಿಳಾಮತ್ತುಮಕ್ಕಳಅಭಿವೃದ್ಧಿಇಲಾಖೆ ಯನ್ನು ಸಂಪರ್ಕಿಸಿ
0 ಕಾಮೆಂಟ್‌ಗಳು