ಐರಾವತ ಯೋಜನೆ 2021

 ಐರಾವತ ಯೋಜನೆ  2021


    ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಪರಿಶಿಷ್ಟ ಜಾತಿಯ ನಿರುದ್ಯೋಗಿ ವಿದ್ಯಾವಂತ ಯುವಕ / ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳ ಮಾಲೀಕರನ್ನಾಗಿ ಮಾಡಿ ಓಲಾ,ಉಬರ್ ಮೇರು ಸಂಸ್ಥೆಗಳ ಸಹಯೋಗದಲ್ಲಿ ಅತಿ ಹೆಚ್ಚು ಆದಾಯ ಪಡೆಯುವ " ಐರಾವತ ಯೋಜನೆ " ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯ ಅಂತರಾಷ್ಟ್ರೀಯ ಮಟ್ಟದ ಪ್ರವಾಸಿಗರ ತಾಣವಾಗಿದ್ದು.  ಈ ಯೋಜನೆಗೆ ಹೆಚ್ಚಿನ ಬೇಡಿಕೆ ಇರುತ್ತದೆ.

ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಯೋಜನೆಗೆ ಗರಿಷ್ಠ ರೂ. 5 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು. ಬ್ಯಾಂಕ್ / ಹಣಕಾಸು ಸಂಸ್ಥೆ / ಫಲಾನುಭವಿಯ ವಂತಿಗೆಯಿಂದ ಭರಿಸಿ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು.

ಆಯ್ಕೆಯಾದ ಫಲಾನುಭವಿಗಳಿಗೆ ಓಲಾ,ಉಬರ್ ಮೇರು ಸಂಸ್ಥೆಗಳೊಂದಿಗೆ ಟೈ-ಅಪ್ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು .ಮೈಸೂರು .ಮಂಗಳೂರು. ಧಾರವಾಡ .ಇನ್ನಿತರೆ ಜಿಲ್ಲಾಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ ಯೋಜನೆಯನ್ನು ರೂಪಿಸಲಾಗಿದೆ.

  ಅರ್ಹತೆಗಳು:-

 1. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
 2. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
 3. ಅರ್ಜಿದಾರರು 18 ವರ್ಷದಿಂದ 50 ವರ್ಷದವರೆಗಿನ ವಯೋಮಾನದ ವರಾಗಿರಬೇಕು.
 4. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
 5. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 5,00,000 /-
 ಮಿತಿಯೊಳಗಿರಬೇಕು.
 6. ಅರ್ಜಿದಾರರು / ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಹಿಂದೆ ನಿಗಮ / ಸರಕಾರದಿಂದ ರೂ. 1,00,000 /- ಮೇಲ್ಪಟ್ಟು ಸೌಲಭ್ಯ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

 ಷರತ್ತುಗಳು :-


       1. ಓಲಾ,ಉಬರ್ ಮೇರು ಸಂಸ್ಥೆಗಳೊಂದಿಗೆ ಟೈ-ಅಪ್ ಕೊಂಡು ಸೌಲಭ್ಯ ಪಡೆಯಲು ಬದ್ದರಿರಬೇಕು.    
    2. ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು. ಆಯ್ಕೆಯಾದ ಫಲಾನುಭವಿಯು  ಓಲಾ,ಉಬರ್ ಮೇರು ಸಂಸ್ಥೆಯಿಂದ ಟ್ಯಾಕ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಬಗ್ಗೆ ಜ್ಞಾನವನ್ನು ಪಡೆಯುವ ಕಾರ್ಯಕ್ರಮಕ್ಕೆ ಹಾಜರಾಗಬೇಕು.

ಈ ಯೋಜನೆಯನ್ನು ಪಡೆಯಲು ನೀವು ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಗೆ ಭೇಟಿ ನೀಡಿ ಅಲ್ಲಿ "ಐರಾವತ ಯೋಜನೆ" ಅಪ್ಲಿಕೇಶನ್ ಪಡೆದುಕೊಂಡು ಅಪ್ಲೈ ಮಾಡಿ ಯೋಜನೆಯನ್ನು ಪಡೆದುಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ ಸಂರ್ಪಕಿಸಿ :- http://adcl.karnataka.gov.in/airavatha.html

ಕಾಮೆಂಟ್‌‌ ಪೋಸ್ಟ್‌ ಮಾಡಿ

3 ಕಾಮೆಂಟ್‌ಗಳು