ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್‌ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. Labour Scholarship Online Application Karnataka 2022-23
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2022-23ನೇ ಸಾಲಿಗೆ ಶೈಕ್ಷಣಿಕ ಸಹಾಯಕ್ಕಾಗಿ ಅಧಿಕೃತ ವೆಬ್‌ಸೈಟ್ ಅಂದರೆ https://klwbapps.karnataka.gov.in/ ಮೂಲಕ ಅರ್ಜಿಗಳನ್ನು ಆಹ್ವಾನಿಸುತ್ತದೆ. ಎಲ್ಲಾ ಅರ್ಹ ಅಭ್ಯರ್ಥಿಗಳು klwbapps.karnataka.gov.in ಸ್ಕಾಲರ್‌ಶಿಪ್ 2022-23 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ಇಲ್ಲಿ ನಾವು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಶೈಕ್ಷಣಿಕ ಸಹಾಯದ ಬಗ್ಗೆ ಸಂಪೂರ್ಣ ವಿವರಗಳನ್ನು ಒದಗಿಸುತ್ತೇವೆ. ಅರ್ಹತಾ ಮಾನದಂಡಗಳು, ವಿದ್ಯಾರ್ಥಿವೇತನದ ಮೊತ್ತ, ಆನ್‌ಲೈನ್ ಪ್ರಕ್ರಿಯೆಗೆ ಹೇಗೆ ಅನ್ವಯಿಸುವುದು ಇತ್ಯಾದಿಗಳನ್ನು ಪರಿಶೀಲಿಸಿ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ(ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್‌ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2022. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. (ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು).
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಸೂಚನೆಗಳು
1) ಒಂದು ಕುಟುಂಬದಿಂದ ಒಬ್ಬ ವಿದ್ಯಾರ್ಥಿಗೆ ಮಾತ್ರ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿಸಲ್ಲಿಸಲು ಅವಕಾಶವಿರುತ್ತದೆ. ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ತಿರಸ್ಕರಿಸಲಾಗುವುದು.
2) ಪಾಸ್‌ಬುಕ್ ಜೆರಾಕ್ಸ್ ಪ್ರತಿ ಲಗತ್ತಿಸುವಾಗ Account Number ಮತ್ತು IFSC Code ಸ್ಪಷ್ಟವಾಗಿಕಾಣುವಂತಿರಬೇಕು. ತಪ್ಪಿದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
3) ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಅಂಕಪಟ್ಟಿಯಲ್ಲಿನ ವಿವರಗಳು ಸ್ಪಷ್ಟವಾಗಿ ಕಾಣುವಂತಿರಬೇಕು.ತಪ್ಪಿದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
4) ಪದವಿ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್ & ಮೆಡಿಕಲ್ ವಿದ್ಯಾರ್ಥಿಗಳ ಅಂಕಪಟ್ಟಿಗಳವಿವರಗಳು ಸ್ಪಷ್ಟವಾಗಿ ಕಾಣುವಂತಿರಬೇಕು ಮತ್ತು ಹಿಂದಿನ 2 ಸೆಮಿಸ್ಟರ್‌ಗಳ ಅಂಕಪಟ್ಟಿಯನ್ನುಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ತಪ್ಪಿದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
5) ವಿದ್ಯಾರ್ಥಿ, ತಂದೆ, ತಾಯಿ ಈ 3 ಜನರ ಆಧಾರ್ ಕಾರ್ಡ್ ಕಡ್ಡಾಯವಾಗಿ ಅಪ್‌ಲೋಡ್ಮಾಡಬೇಕು. ಆಧಾರ್ ಸಂಖ್ಯೆ ತಪ್ಪಾಗಿ ನಮೂದಿಸಿದಲ್ಲಿ ಅಥವಾ ತಪ್ಪಾಗಿ ಪಿ.ಡಿ.ಎಫ್.ಅಪ್‌ಲೋಡ್ ಮಾಡಿದಲ್ಲಿ ತಪ್ಪಿದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
6) ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ, ಅವರ ಮರಣ ಪ್ರಮಾಣ ಪತ್ರ ಅಪ್‌ಲೋಡ್ಮಾಡಬೇಕು. ತಪ್ಪಿದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
7) ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪ್ರತಿ ಸೆಮಿಸ್ಟರ್‌ನಲ್ಲಿ ಪ್ರಥಮವಾಗಿ ಉತ್ತೀರ್ಣರಾದವರಿಗೆ ಮಾತ್ರಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲಾಗುವುದು. ಯಾವುದೇ ಒಂದು ಸೆಮಿಸ್ಟರ್‌ನಲ್ಲಿಅನುತ್ತೀರ್ಣರಾಗಿ ಪೂರಕ ಸೆಮಿಸ್ಟರ್‌ನಲ್ಲಿ ಉತ್ತೀರ್ಣರಾಗಿರುವವರ ಅರ್ಜಿಯನ್ನು ಶೈಕ್ಷಣಿಕಪ್ರೋತ್ಸಾಹ ಧನ ಸಹಾಯಕ್ಕಾಗಿ ಪರಿಗಣಿಸದೆ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಕಾರ್ಮಿಕ ಇಲಾಖೆಯು ನಿಗದಿಪಡಿಸಿದ ಅರ್ಹತೆಯಲ್ಲಿ ಮಾತ್ರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಅದು ಈ ಕೆಳಗಿನಂತಿವೆ :-
ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.
ಕಾರ್ಮಿಕ ಕಲ್ಯಾಣ ಕಾರ್ಯಕರ್ತ ವೇತನದಾರ ಮಕ್ಕಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಸಾಮಾನ್ಯ ಅರ್ಜಿದಾರರು 50% ಅಂಕಗಳನ್ನು ಹೊಂದಿರಬೇಕು.
ಮಾನ್ಯತೆ ಪಡೆದ ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
• ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್ ದೃಢೀಕೃತ ಪ್ರತಿ
• ರೇಷನ್ ಕಾರ್ಡ್
• ಉದ್ಯೋಗ ದೃಡೀಕರಣ ಪತ್ರ
• ಬ್ಯಾಂಕ್ ಖಾತೆ ಪುಸ್ತಕ ಪ್ರತಿ
• ಶಿಕ್ಷಣದ ವಿವರಗಳು
• ಛಾಯಾಚಿತ್ರ
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ
ಅರ್ಜಿ ಸಲ್ಲಿಸಬಹುದಾಗಿರುತ್ತದೆ. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ
ಶೇ.50 ಪ.ಜಾ/ಪ.ಪಂ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48,1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402,
9141602562 ಮೂಲಕ ಸಂಪರ್ಕಿಸಬಹುದಾಗಿದೆ
0 ಕಾಮೆಂಟ್‌ಗಳು