Devaraj Urs Loan Details : ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬಯಸುವವರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೂಚನೆ :
ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ|ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಡಿ. ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಹೋಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆಗಳು :
1. ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು.
ಹೊಲಿಗೆ ಯಂತ್ರ ವಿತರಣೆ ಯೋಜನೆ:
2. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ
ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬಯಸುವವರು ಹಿಂದುಳಿದ ವರ್ಗಗಳ
ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ
ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ
ಉಪಸಮುದಾಯಗಳು ಹೊರತುಪಡಿಸಿ)
3. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/ಗಳು, ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಒಳಗಿರಬೇಕು.
4. ಅರ್ಜಿದಾರರ ವಯಸ್ಸು 18ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
5. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯು ಅರ್ಹರಾಗಿರುತ್ತಾರೆ. ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಕೊನೆಯ ದಿನಾಂಕ :
05.01.2023 ರಿಂದ 20.02.2023ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ನಿಗಮದ ವೆಬ್‌ಸೈಟ್
www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಹೆಚ್ಚಿನ
ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ : 080-22374832, 8050770004 & 6, 7090400100 /
7090400900 ನಿಗಮದ ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ
ಸಂಪರ್ಕಿಸಬಹುದು.
0 ಕಾಮೆಂಟ್‌ಗಳು