Karnataka Budget 2023 : ಕರ್ನಾಟಕ ಬಜೆಟ್ ಪ್ರಮುಖ ಹೈಲೆಟ್ಸ್ 2023
ರೈತರ ಬಡ್ಡಿ ರಹಿತ ಸಾಲವನ್ನು 3 ರಿಂದ 5 ಲಕ್ಷಕ್ಕೆ ಹೆಚ್ಚಳ.
30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ರೂ ಸಾಲ ವಿತರಿಸಲಾಗುವುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯಡಿ 2023-24 ನೇ ಸಾಲಿನಿಂದ 10 ಸಾವಿರ ರೂಪಾಯಿ ಹೆಚ್ಚುವರಿ ಸಹಾಯ.
ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ.
ಬಡ್ಡಿರಹಿತ ಅಲ್ಪಾವಧಿ ಸಾಲ 3 ರಿಂದ 5 ಲಕ್ಷಕ್ಕೆ ಏರಿಕೆ.
ಇಸ್ರೋ ಸಹಯೋಗದೊಂದಿಗೆ ಡಿಜಿಟಲ್ ಕೃಷಿಯಲ್ಲಿ ಜಿಯೋ-ಸ್ಪೇಷಿಯಲ್ ತಾಂತ್ರಿಕತೆಯನ್ನ ಅಳವಡಿಸಲು 50 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮ.
ತೋಟಗಾರಿಕೆ ಉತ್ಪಾದನೆ ಹೆಚ್ಚಿಸಲು 10 ಕೋಟಿ ಒಂದು ಬಾರಿಯ ವಿಶೇಷ ಅನುದಾನ.
ರಾಜ್ಯದ 10 ಪ್ರಮುಖ ರೇಷ್ಮೆ ಬೆಳೆಯುವ ಪ್ರದೇಶಗಳಲ್ಲಿ Hot Air Conveyor Dryer ಅನ್ನು ಅಳವಡಿಸಲು 5 ಕೋಟಿ ರೂ. ಗಳ ಅನುದಾನ.
ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ.
ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಅನುದಾನ ನೀಡಲಾಗಿದೆ.
ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ
10,000 ವಸತಿ ರಹಿತ ಮೀನುಗಾರರಿಗೆ ವಸತಿ ನಿರ್ಮಾಣ
ಮಹಿಳೆಯರಿಗೆ ಆರ್ಥಿಕ ಶಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿ
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ.
ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ಸಾರಿಗೆ ಸೌಲಭ್ಯಕ್ಕೆ 12.5 ಕೋಟಿ ರೂ. ವೆಚ್ಚದಲ್ಲಿ ಹೊಸ 'ನಗು ಮಗು' ವಾಹನ
ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ 'ವಿದ್ಯಾವಾಹಿನಿ' ಯೋಜನೆಯಡಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪಾಸ್
ಪದವಿ ಶಿಕ್ಷಣವನ್ನು ಮುಗಿಸಿ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, 'ಯುವಸ್ನೇಹಿ' ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು
ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ
0 ಕಾಮೆಂಟ್‌ಗಳು