Pratibha Puraskar presented to SSLC and PUC students :ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2023

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2023

Pratibha Puraskar presented to SSLC and PUC students :ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2023



ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 'ಪ್ರತಿಭಾ ಪುರಸ್ಕಾರ' ವನ್ನು ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2023ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ನಮ್ಮ ಸಂಘದಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು :-

1. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ರಾಜ್ಯ ಸರ್ಕಾರಿ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.
2. ಸಂಘದಿಂದ ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರಿಂದ ದೃಢೀಕರಿಸಿ ಸಲ್ಲಿಸುವುದು.
3. ನಿಗಮ, ಮಂಡಳಿ, ಪಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.
4. ನಮೂನೆ ಹಾಗೂ ಅಗತ್ಯ ದಾಖಲೆಗಳಿಲ್ಲದಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


5. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂರ್ಪಕಿಸುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು