Gruh lakshmi App : ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಗೆ ವಿಶೇಷ ಆ್ಯಪ್‌

Gruh lakshmi App : ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಗೆ ವಿಶೇಷ ಆ್ಯಪ್‌ ರೆಡಿ

Gruh lakshmi App Karnataka


    ಮಹಿಳೆಯರಿಗೆ ಮಾಸಿಕ 2,000 ರೂ ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಆಗಸ್ಟ್‌ನಿಂದ ಹಣ ನೀಡಲು ಸರ್ಕಾರ ತೀರ್ಮಾನಿಸಿದೆ. ಶೀಘ್ರದಲ್ಲೇ ಈ ಯೋಜನೆಗೆ ಆಪ್ ಮೂಲಕ ನೋಂದಣಿ ಆರಂಭವಾಗಲಿದೆ ಎಂದರು. Gruh lakshmi App Download


Gruhalakshmi Application Form PDF ಗೃಹಲಕ್ಷ್ಮಿ ಯೋಜನೆ ಆಫ್ಲಿಕೇಶನ್‌


ಇದಕ್ಕೆ ಪ್ರತ್ಯೇಕ ಆ್ಯಪ್‌ ಸಿದ್ಧವಾಗಿದ್ದು, ಬುಧವಾರ (ಜೂ.28) ಸಿಎಂ ಅಧ್ಯಕ್ಷತೆಯಲ್ಲಿನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನದ ಬಳಿಕ ಅರ್ಜಿ ಸ್ವೀಕಾರ ಶುರುವಾಗಲಿದೆ. ಸಿಎಂ ಸಿದ್ದರಾಮಯ್ಯ ಪರಿಶೀಲಿಸಿದ ಬಳಿಕ, ಬುಧವಾರದ ಸಂಪುಟ ಸಭೆ ಯೋಜನೆಯ ರೂಪುರೇಷೆ ಅಂತಿಮಗೊಳಿಸಲಿದೆ. ಬಹುತೇಕ ಜುಲೈ ಆರಂಭದಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ.


ಆತುರದಿಂದ ತಾಂತ್ರಿಕ ತೊಂದರೆ ಆಗಬಾರದು ಎಂದು ಗೃಹಲಕ್ಷ್ಮಿ ಯೋಜನೆಯನ್ನು ಕಾಲಾವಕಾಶ ಪಡೆದು ಜಾರಿ ಮಾಡಲಾಗುವುದು. ಬಾಪು ಕೇಂದ್ರ, ಪಂಚಾಯ್ತಿ ಕೇಂದ್ರ ಹಾಗೂ ಸ್ವಂತ ಮೊಬೈಲ್ ನಲ್ಲಿ ಅರ್ಜಿ ತುಂಬಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಜೊತೆಗೆ ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮನೆ ಮನೆಗೆ ಹೋಗಿ ಪಕ್ಷಭೇದ ಮರೆತು ಈ ಯೋಜನೆಯ ಅರ್ಜಿ ತುಂಬಬೇಕು” ಎಂದು ಕರೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು